ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರಿನಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿಸಂಸ್ಥೆಯಲ್ಲಿ ಖಾಲಿ ಇರುವ ಪ್ರೋಗ್ರಾಮರ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳುವ ಮುಖಾಂತರ ಹುದ್ದೆಗಳಿಗೆ ಆಯ್ಕೆ ಆಗಬಹುದು.
ಸಂದರ್ಶನ ನಡೆಯುವ ಸ್ಥಳ:
ABDUL NAZIR SAB
STATE INSTITUTE OF RURAL DEVELOPMENT & PANCHAYAT RAJ,
Lalithamahal Road,
Mysuru- 570011.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments