ರೈಫಲ್ಸ್ ನಲ್ಲಿ ಟೆಕ್ನಿಕಲ್ ಮತ್ತು ಟ್ರೇಡ್ಸ್ ಮನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತದ ಅತ್ಯಂತ ಪ್ರಾಚೀನ ಅರೆ ಸೈನಿಕ ಘಟಕಗಳಲ್ಲಿ ಒಂದಾಗಿರುವ ಆಸ್ಸಾಂ ರೈಫಲ್ ನಲ್ಲಿ ಖಾಲಿ ಇರುವ ಟೆಕ್ನಿಕಲ್ ಮತ್ತು ಟ್ರೇಡ್ಸ್ ಮನ್ ಹುದ್ದೆಗಳ ಭರ್ತಿ ಮಾಡಲು ರಾಜ್ಯವಾರು ಹುದ್ದೆಗಳನ್ನು ವಿಂಗಡಣೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು 19 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದಾದ್ಯಂತ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC/ ITI/ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಮೀಸಲಾತಿ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1 ಜನೆವರಿ 2023 ಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಪೂರೈಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಹಾಗೂ ಮಾಜಿ ಸಾನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments