ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ 60 ಅಸಿಸ್ಟೆಂಟ್ ಹೈವೇ ಇಂಜಿನಿಯರ್, ಅಸಿಸ್ಟೆಂಟ್ ಬ್ರಿಜ್/ಸ್ಟ್ರಕ್ಚರಲ್ ಇಂಜಿನಿಯರ್ ಮತ್ತು ಕ್ವಾಲಿಟಿ ಕಂಟ್ರೋಲ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 60
Assistant Highway Engineer- 34
Assistant Bridge/ Structural Engineer - 06
Quality Control Engineer - 20
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 25,504/- ರೂ ಗಳಿಂದ 46,417/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments