ರೈಲ್ವೆ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರೈಲ್ವೆ ಇಂಡಿಯಾ ಟೆಕ್ನಿಕಲ್ ಯಾಂಡ್ ಎಕನಾಮಿಕ್ಸ್ ಸರ್ವಿಸ್ ಸಂಸ್ಥೆಯಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಆಧಾರದ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 24/01/2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳಗಳು :
1. Rites Limited, Ojas Bhawan, 7th Floor, DJ/20, Street No.326, Action Area 1D, Newtown, Kolkata 700156
2. RITES Limited, Shikhar, Plot 1, Leisure Valley, RITES Bhawan, Near IFFCO chowk Metro Station, Sector 29, Gurugram, 122001, Haryana
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕವಾಗಿ ₹3,46,426/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments