ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ ಗ್ರೂಪ್-D 32,438 ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ32,438 ಅಸಿಸ್ಟಂಟ್, ಟ್ರಕ್ ಮೆಂಟೆನರ್, ಪಾಯಿಂಟ್ಸ್ ಮ್ಯಾನ್-B, ಅಸಿಸ್ಟಂಟ್ TRD ಮತ್ತು ಅಸಿಸ್ಟಂಟ್ P-Way ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 32,438 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 22 ಫೆಬ್ರುವರಿ 2025 ರಂದು ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 01 ಮಾರ್ಚ್ 2025 ರ ತನಕ ವಿಸ್ತರಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 32,438
Pointsman-B : 5058
Assistant (Track Machine) : 799
Assistant (Bridge) : 301
Track Maintainer Gr. IV : 13187
Assistant P-Way : 247
Assistant (C&W) : 2587
Assistant TRD : 1381
Assistant (S&T) : 2012
Assistant Loco Shed (Diesel) : 420
Assistant Loco Shed (Electrical) : 950
Assistant Operations (Electrical) : 744
Assistant TL & AC : 1041
Assistant TL & AC (Workshop) : 624
Assistant (Workshop) : 3077
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ಆಯಾ ವಿಭಾಗದಲ್ಲಿ ITI ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ 500/- ಶುಲ್ಕವಿದ್ದು, SC/ST/ಮಹಿಳಾ/ಮಾಜಿ ಸೈನಿಕ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಥಿಗಳು ಕನಿಷ್ಠ 18 ಹಾಗೂ ಗರಿಷ್ಠ 36 ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 18,000/- ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments