ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 11,558 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ11558 ಪದವಿ ವಿಭಾಗದ ಸ್ಟೇಷನ್ ಮಾಸ್ಟರ್, ಹಿರಿಯ ಗುಮಾಸ್ತರು ಮತ್ತು ಬೆರಳಚ್ಚುದಾರರು, ಸರಕು ರೈಲು ನಿರ್ವಹರು ಪದವಿ ಪೂರ್ವ ವಿಭಾಗದ ಕಮರ್ಷಿಯಲ್ ಮತ್ತು ಟಿಕೆಟ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 11558 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದೀಗ ಆನ್ ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 20 ವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಪದವಿ ಆಧಾರಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 14/09/2024 ಹಾಗೂ ಕೊನೆಯ ದಿನಾಂಕ 13/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಪದವಿ ಪೂರ್ವ ಆಧಾರಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/09/2024 ಹಾಗೂ ಕೊನೆಯ ದಿನಾಂಕ 20/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 11,558
ಪದವಿ ವಿಭಾಗ : 8113
1. Commercial cum Ticket Supervisor : 1736
2. Station Master : 994
3. Goods Train Manager : 3144
4. Junior Account Assistant cum Typist : 1507
5. Senior Clerk cum Typist : 732
ಪದವಿ ಪೂರ್ವ ವಿಭಾಗ : 3445
1. Commercial cum Ticket Clerk : 2022
2. Accounts Clerk cum Typist : 361
3. Junior Clerk cum Typist : 990
4. Trains Clerk : 72





Comments