ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 3317 ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಜಬಲ್ ಪುರ ಡಿವಿಷನ್, ಭೋಪಾಲ್ ಡಿವಿಷನ್, ಮತ್ತು ಕೋಟಾ ಡಿವಿಷನ್ ನಲ್ಲಿ ಖಾಲಿ ಇರುವ 3317 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 04/09/2024.
ಹುದ್ದೆಗಳ ವಿವರ : 3317
JBP Division: 1262
BPL Division: 824
KOTA Division: 832
CRWS BPL: 175
WRS KOTA: 196
HQ/JBP: 28
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇತರ ವರ್ಗದ ಅಭ್ಯರ್ಥಿಗಳು 141 ರೂ ಪ್ರೊಸೆಸಿಂಗ್ ಮೊತ್ತವನ್ನು ಪಾವತಿಸಬೇಕು.
SC/ ST ಮತ್ತು ಅಂಗವಿಕಲ ಅಭ್ಯರ್ಥಿಗಳು 41 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments