Loading..!

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:9 ಸೆಪ್ಟೆಂಬರ್ 2020
not found

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಸಾಫ್ಟ್ವೇರ್ ಡೆವಲಪರ್ ಮತ್ತು ಮೊಬೈಲ್ ಅಪ್ಲಿಕೇಷನ್ ಡೆವಲಪರ್ ಹುದ್ದೆಗಳ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


* ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಸದರಿ ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಸೇವೆಯನ್ನು ಮುಂದುವರಿಸುವ ಬಗ್ಗೆ ನಿರ್ಧರಿಸಲಾಗುವುದು. 


* ಹುದ್ದೆಯ ವಿವರ
- ಸಾಫ್ಟವೇರ ಡೆವಲಪರ್
- ಮೊಬೈಲ್ ಅಪ್ಲಿಕೇಶನ್ ಡೆವಲಪರ್   



ಈ ಮೇಲಿನ ಹುದ್ದೆಗಳನ್ನು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಹೊರಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು.   


ಅರ್ಜಿ ನಮೂನೆ ಸ್ಪಷ್ಟವಾಗಿ ಭರ್ತಿ ಮಾಡಿ ತಮ್ಮ ಸಹಿಯೊಂದಿಗೆ ಆಯುಕ್ತಾಲಯದ ಇ ಮೇಲ್ : careers.nrega@gmail.com ವಿಳಾಸಕ್ಕೆ ಕಳುಹಿಸುವುದು. ಅರ್ಜಿ ಸಲ್ಲಿಸಲು ಕಡೆ ದಿನಾಂಕ ನಿಗದಿಪಡಿಸಿದ ದಿನಾಂಕದ ನಂತರ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿಗಳನ್ನು ಇಮೇಲ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು ಮತ್ತು ಆಯುಕ್ತಾಲಯದಲ್ಲಿ ಯಾವುದೇ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗುವುದಿಲ್ಲ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಅವರನ್ನು ಸಂಪರ್ಕಿಸಬಹುದು.

No. of posts:  2
Application Start Date:  4 ಸೆಪ್ಟೆಂಬರ್ 2020
Application End Date:  15 ಸೆಪ್ಟೆಂಬರ್ 2020
Work Location:  Karnataka
Qualification:
- ME / M.Tech(CS/IT),  MCA / MSc(CS/IT), BE / B.Tech(CS/IT) ಪದವಿಯನ್ನು ಹೊಂದಿರಬೇಕು.  
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 45 ವರ್ಷ ವಯಸ್ಸನ್ನು ಮೀರಿರಬಾರದು.
Pay Scale:
ವೇತನ ಶ್ರೇಣಿ :
- ಸಾಫ್ಟವೇರ ಡೆವಲಪರ್ ಹುದ್ದೆಗೆ  : 50,000 /- 

- ಮೊಬೈಲ್ ಅಪ್ಲಿಕೇಶನ್ ಡೆವಲಪರ್ ಹುದ್ದೆಗೆ :  40,000 /-   

To Download Official Notification

Comments