ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ : ಈ ಕುರಿತು ಮಾಹಿತಿ ನಿಮಗಾಗಿ

ರೈಲ್ ವಿಕಾಸ್ ನಿಗಮ್ ಲಿಮಿಟೆಡ್ (RVNL) ಸಂಸ್ಥೆಯು 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಡಿಯಲ್ಲಿ ಖಾಲಿ ಇರುವ ಒಟ್ಟು 4 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪ್ಲಾನಿಂಗ್ ಮ್ಯಾನೇಜರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕ ಮಾಡಿ ಕೊಳ್ಳಲಾಗುತ್ತದೆ. 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 4
Planning Manager : 2
Assistant Manager: 2
ವಿದ್ಯಾರ್ಹತೆ : RVNL ನೇಮಕಾತಿ ನಿಯಮಾನುಸಾರವಾಗಿ ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Planning Manager : BE/ B.Tech in Civil
Assistant Manager: MBA
ಮಾಸಿಕ ವೇತನ :
Planning Manager : ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
Assistant Manager : Rs. 30000 ರಿಂದ 120000/- ವರೆಗೆ.
ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕೆ ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಿಯಮಗಳ ಪ್ರಕಾರ ಇರಲಿದೆ.
ಆಯ್ಕೆ :
Planning Manager ಹುದ್ದೆಗಳನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರ ಮೇಲೆ ನೇರ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Assistant Manager ಹುದ್ದೆಗಳನ್ನು ನೇಮಕಾತಿ ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
- ಮೊದಲನೆಯದಾಗಿ RVNL ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಲಾಗಿದೆ: - ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ವಿಳಾಸ (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ).
ಸಹಾಯಕ ವ್ಯವಸ್ಥಾಪಕ ಹುದ್ದೆ :
ಅರ್ಜಿ ಸಲ್ಲಿಸುವ ವಿಳಾಸ :
ದಿ ಡಿಸ್ಪ್ಯಾಚ್ ವಿಭಾಗ, ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ಆರ್‌ಕೆ ಪುರಂ, ನವದೆಹಲಿ-110066.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :31/07/2025
ಯೋಜನಾ ವ್ಯವಸ್ಥಾಪಕ ಹುದ್ದೆ :
ಈ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗುವಾಗ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ : ರೈಲ್ ವಿಕಾಸ್ ನಿಗಮ್ ಲಿಮಿಟೆಡ್, ಮೆಜ್ಜನೈನ್ ಮಹಡಿ, ತಿರುಮಯಿಲೈ ರೈಲ್ವೆ ನಿಲ್ದಾಣ, ಮೈಲಾಪುರ, ಚೆನ್ನೈ-600004.
ಸಂದರ್ಶನ ನಡೆಯುವ ದಿನಾಂಕ : 18 ಜುಲೈ 2025
ಪ್ರಮುಖ ದಿನಾಂಕಗಳು:
ಆಫ್‌ಲೈನ್/ವಾಕಿನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2025
ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2025
ಯೋಜನಾ ವ್ಯವಸ್ಥಾಪಕ ಹುದ್ದೆಗಳಿಗೆ ವಾಕ್-ಇನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಜುಲೈ 2025
Comments