ರೈಲು ಗಾಲಿ ಕಾರ್ಖಾನೆ (RWF)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ರೈಲು ಗಾಲಿ ಕಾರ್ಖಾನೆಯು (RWF) ಭಾರತೀಯ ರೈಲ್ವೆಯ ಉತ್ಪಾದನಾ ಘಟಕವಾಗಿದ್ದು, ರೈಲು ಗಾಲಿ ಕಾರ್ಖಾನೆಯಲ್ಲಿ ಖಾಲಿ ಇರುವ 192 ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಟರ್ನರ್ ಮತ್ತು ಮೆಕ್ಯಾನಿಸ್ಟ್ ಸರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 20/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 192
ಫಿಟ್ಟರ್ - 85
ಮೆಕ್ಯಾನಿಸ್ಟ್ - 31
ಮೆಕ್ಯಾನಿಕ್ (ಮೋಟಾರು ವಾಹನ) - 08
ಟರ್ನರ್ - 05
ಸಿಎನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ (ಸಿಇಒ ಗ್ರೂಪ್) - 23
ಎಲೆಕ್ಟ್ರಿಷಿಯನ್ - 18
ಎಲೆಕ್ಟ್ರಾನಿಕ್ ಮೆಕ್ಯಾನಿಕ್ - 22
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Senior Personnel Officer,
Personnel Department, Rail Wheel Factory, Yelahanka, Bangalore - 560064
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು, ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಎನ್ ಸಿ ಪ್ರೋಗ್ರಾಮಿಂಗ್ ಕಮ್ ಆಪರೇಟರ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ 10,899/- ರೂ ಹಾಗೂ ಉಳಿದ ಅಭ್ಯರ್ಥಿಗಳಿಗೆ 12,261/- ರೂ ವನ್ನು ಸ್ಟೈ ಫ೦ಡ್ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments