Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Hanamant Katteppanavar | Date:15 ಜನವರಿ 2021
not found
ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ.

ಪ್ರಸ್ತುತ ಇದೆ ಕಂಪನಿಯಲ್ಲಿ ಖಾಲಿ ಇರುವ 50 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆಯು ಜನವರಿ 18, 2021 ರಂದು ಮುಕ್ತಾಯಗೊಳ್ಳುವುದು.
No. of posts:  50
Application End Date:  18 ಜನವರಿ 2021
Selection Procedure: ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ದಿನಾಂಕ ಡಿಸೆಂಬರ್ 5, 2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 17,980/- ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.


- ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಧಿಕೃತ ವೆಬಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮತ್ತು ಎಲ್ಲಾ ಮೂಲ ದಾಖಲೆಗಳೊಂದಿಗೆ  ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ ಕೊಡಬೇಕು.


* ಕಚೇರಿಯ ವಿಳಾಸ :
GM (Hosp. Admn & Coordn.), 
Burnpur Hospital, SAIL-IISCO Steel Plant, 
P.O.- Burnpur, PIN-713325, Dist.- Paschim Bardhaman, West Bengal ಕ್ಕೆ ಫೆಬ್ರುವರಿ 18 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. 


* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 


To Download the official notification

Comments