Loading..!

ಭಾರತೀಯ ಉಕ್ಕು ಪ್ರಾಧಿಕಾರ(SAIL)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:12 ಡಿಸೆಂಬರ್ 2023
not found

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ 92 ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮೈನಿಂಗ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31ಡಿಸೆಂಬರ್ 2023 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 92 
Chemical Engineering : 03
Civil Engineering : 03
Electrical Engineering : 26
Instrumentation Engineering : 07
Mechanical Engineering : 34
Metallurgy Engineering : 05
Mining Engineering : 14

No. of posts:  92
Application Start Date:  12 ಡಿಸೆಂಬರ್ 2023
Application End Date:  31 ಡಿಸೆಂಬರ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅನುಗುಣವಾಗಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 31 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 60,000/- ರಿಂದ 1,80,000ರೂ ಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: Engineering

Comments