ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ (SAIL) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ(SAIL) ಖಾಲಿ ಇರುವ 239 ಮೆಡಿಕಲ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜ್ ಮೆಂಟ್ ಟ್ರೇನಿ ಟೆಕ್ನೀಷಿಯಲ್ ಹಾಗೂ ಮೈನಿಂಗ್ ಫೋರ್ ಮ್ಯಾನ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು15 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBBS/ Degree/ Diploma in Industrial Health/ B.E./B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಸಾಮಾನ್ಯ, OBC ಮತ್ತು ಆರ್ಥಿಕ ದುರ್ಬಲ ವರ್ಗದವರು ಎಕ್ಸಿಕ್ಯುಟಿವ್ ವಿಭಾಗದ ಹುದ್ದೆಗಳಿಗೆ 700 ರೂ. ಹಾಗೂ ಎಸ್‌ಸಿ/ ಎಸ್ ಟಿ/ವಿಶೇಷ ಚೇತನರು/ ಮಾಜಿ ಸೈನಿಕರು-200 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಅಟೆಂಡೆಂಟ್ ಮತ್ತು ಮೈನಿಂಗ್ ಸಿರ್‌ದಾರ್ ಹುದ್ದೆಗಳಿಗೆ 300 ರೂ. ಎಸ್‌ಸಿ/ ಎಸ್ ಟಿ/ವಿಶೇಷ ಚೇತನರು/ ಮಾಜಿ ಸೈನಿಕರು 100 ಹಾಗೂ
- ಉಳಿದ ಎಲ್ಲಾ ಹುದ್ದೆಗಳಿಗೂ 500 ರೂ. ಎಸ್‌ಸಿ/ ಎಸ್ ಟಿ/ ವಿಶೇಷ ಚೇತನರು/ ಮಾಜಿ ಸೈನಿಕರು 150 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 41 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಭಾರತೀಯ ಉಕ್ಕು ಪ್ರಾಧಿಕಾರ (SAIL) ನಿಯಮಾನುಸಾರದಂತೆ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments