ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ SAIL ನಲ್ಲಿ ಖಾಲಿ ಇರುವ 341 ಆಪರೇಟರ್ ಕಮ್ ಟೆಕ್ನಿಷಿಯನ್ (ಟ್ರೈನಿ) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 26 ಫೆಬ್ರುವರಿ 2024 ಹಾಗೂ ಕೊನೆಯ ದಿನಾಂಕ 18 ಮಾರ್ಚ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 341
Operation Cum Technician Trainee – Metallurgy - 57
Operation Cum Technician Trainee – Electrical - 64
Operation Cum Technician Trainee – Mechanical - 100
Operation Cum Technician Trainee– Instrumentation - 39
Operation Cum Technician Trainee – Civil - 18
Operation Cum Technician Trainee – Chemical - 18
Operation Cum Technician Trainee – Ceramic - 06
Operation Cum Technician Trainee – Electronics - 08
Operation Cum Technician Trainee – Computer/IT - 20
Operation Cum Technician Trainee – Draughtsman - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅನುಗುಣವಾಗಿ SSLC/ Diploma/ Engineering ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಹುದ್ದೆಗೆ ಅನುಸಾರವಾಗಿ ಹಿಂದುಳಿದ ವರ್ಗದ ಮತ್ತು ಸಾಮಾನ್ಯ / OBC/ EWS ಅಭ್ಯರ್ಥಿಗಳು : 500 ರೂ ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- ಪ.ಜಾ ಮತ್ತು ಪ.ಪಂ ದ ಅಭ್ಯರ್ಥಿಗಳಿಗೆ : 200 ರೂ ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ- 28 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments