ಭಾರತೀಯ ಉಕ್ಕು ಪ್ರಾಧಿಕಾರ(SAIL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಸರ್ಕಾರಿ ಸ್ವಾಮ್ಯದ ಉಕ್ಕು ತಯಾರಿಕಾ ಸಂಸ್ಥೆಯಾದ ಭಾರತೀಯ ಉಕ್ಕು ಪ್ರಾಧಿಕಾರ (SAIL) ವು 24 ಜನವರಿ 1974 ರಂದು ಸ್ಥಾಪಿಸಲಾದ ಸಾರ್ವಜನಿಕ ವಲಯದ ಉದ್ಯಮವಾಗಿದೆ. SAIL ಪ್ರಸ್ತುತ ವಿಶ್ವದ 20 ನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಭಾರತದಲ್ಲಿ ಅತಿದೊಡ್ಡ ಕಂಪನಿಯಾಗಿದೆ. ಪ್ರಸ್ತುತ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (SAIL) ನಲ್ಲಿ ಖಾಲಿ ಇರುವ 04 ಸಲಹೆಗಾರರು (ಕ್ರೀಡಾ ತರಬೇತುದಾರರು) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 11 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 28,000/-ರೂ ಗಳಿಂದ 36,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments