ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ - ಆಡಳಿತ) ಸಕಾಲ ಮಿಷನ್ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Yallamma G | Date:25 ಜನವರಿ 2022

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಸಕಾಲ ಮಿಷನ್ ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಯಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚು ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮಅರ್ಜಿಯನ್ನು ಇ-ಮೇಲ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಇ-ಮೇಲ್ ವಿಳಾಸ: aosakala@karnataka.gov.in
ಈ ಹುದ್ದೆಗಳಿಗೆ ದಿನಾಂಕ 07/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
ಕೊಠಡಿ 104 , ಗೇಟ್-1,
ಬಹುಮಹಡಿ ಕಟ್ಟಡ,
ಬೆಂಗಳೂರು -560 001
Application Start Date: 22 ಜನವರಿ 2022
Application End Date: 1 ಫೆಬ್ರುವರಿ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಈ ಹುದ್ದೆಗೆ B.E in Computer Science M.Tech (Optional) ವಿದ್ಯಾರ್ಹತೆಯನ್ನುಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಪೂರೈಸಿರಬೇಕು
Employment Type: FULL_TIME
Hiring Organization: KPSC Vaani https://www.kpscvaani.com




Comments