ಸಶಸ್ತ್ರ ಸೀಮಾಬಲದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾಬಲದಲ್ಲಿ (SSB)ದಲ್ಲಿ ಖಾಲಿ ಇರುವ 399 ಕ್ರೀಡಾಪಟು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪುರುಷ ಅಭ್ಯರ್ಥಿಗಳಿಗೆ ಒಟ್ಟು 214 ಹುದ್ದೆಗಳು
ಮಹಿಳಾ ಅಭ್ಯರ್ಥಿಗಳಿಗೆ ಒಟ್ಟು 185 ಹುದ್ದೆಗಳು
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು S.S.L.C ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಜೊತೆಗೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
OBC/ SC/ ST/ ಮಹಿಳೆಯರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷವಯೋಮಿತಿಯನ್ನು ಹೊಂದಿರಬೇಕು.
ನೇಮಕಾತಿ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700/- ರಿಂದ 69,100/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments