ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಪದವೀಧರರಿಂದ ಅರ್ಜಿ ಆಹ್ವಾನ
Published by: Basavaraj Halli | Date:3 ಡಿಸೆಂಬರ್ 2020

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ದ ದೇಶದ ವಿವಿಧ ಭಾಗಗಳಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ (PO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳಿ ಈ ಕೆಳಗೆ ನೀಡಿರುವ ಮಾಹಿತಿಗಳನ್ನು ಓದಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ಹಾಗೂ ಶುಲ್ಕ ಪಾವತಿ : ನವೆಂಬರ್ 14,2020 ರಿಂದ ಡಿಸೆಂಬರ್ 4,2020
- ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ದಿನಾಂಕ: ಡಿಸೆಂಬರ್ ತಿಂಗಳ 3ನೇ ವಾರದ ನಂತರ
- ಫೇಸ್-I: ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆ ದಿನಾಂಕ: ಡಿಸೆಂಬರ್ 31,2020 ಮತ್ತು ಜನವರಿ 2, 4, 5,2021ನೇ ತಾರೀಖು
No. of posts: 2000
Application Start Date: 14 ನವೆಂಬರ್ 2020
Application End Date: 4 ಡಿಸೆಂಬರ್ 2020
Work Location: Across India
Selection Procedure: ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಾಸಾಗಿರಬೇಕು
Fee:
- ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ/ OBC ಅಭ್ಯರ್ಥಿಗಳು 750/-ರೂ
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವದಿಲ್ಲ
Age Limit:
ದಿನಾಂಕ ಏಪ್ರಿಲ್ 1,2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಹೆಚ್ಚುವರಿ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:
ಪ್ರೊಬೆಷನರಿ ಅಧಿಕಾರಿ (ಪಿಓ) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 27,620/- ರಿಂದ 42,020/-ರೂ ವೇತನ ಹಾಗೂ ಇತರೆ ಭತ್ಯೆ ನೀಡಲಾಗುವುದು.

Comments