ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ |ಕೂಡಲೇ ಅರ್ಜಿ ಸಲ್ಲಿಸಿ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭಾರತದೆಲ್ಲೆಡೆ ಖಾಲಿ ಇರುವ 48 ಸ್ಪೆಷಲಿಸ್ಟ್ ಕೇಡರ್ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25/02/2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 48
- ಸಹಾಯಕ ವ್ಯವಸ್ಥಾಪಕ - 48
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
- ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ಮಾರ್ಚ್ 20,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಮಾರ್ಚ್ 5,2022ರಂದು ಬಿಡುಗಡೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಗಸ್ಟ್ 31,2021ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments