ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ 600 ಹುದ್ದೆಗಳ ನೇಮಕಾತಿ | ಇಂದಿನಿಂದಲೇ ಅರ್ಜಿ ಸಲ್ಲಿಕೆ ಆರಂಭ | ಕೂಡಲೇ ಅರ್ಜಿ ಸಲ್ಲಿಸಿ

ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಸುಮಾರು 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ನ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು 16/01/2025 ರಿಂದ 19/01/2025 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
ಹುದ್ದೆಗಳ ವಿವರ : 600
1. Regular Vacancies : 586
2. Backlog Vacancies : 14
ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ(EWS) ಮತ್ತು ಇತರೆ ಹಿಂದುಳಿದ ವರ್ಗಗಳ(OBC) ಅಭ್ಯರ್ಥಿಗಳಿಗೆ: ರೂ.750/-
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
- OBC ಅಭ್ಯರ್ಥಿಗಳಿಗೆ 3 ವರ್ಷ
- SC ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಪ್ರಸ್ತುತ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಮಾಸಿಕ ವೇತನದ ಜೊತೆಗೆ ಇತರೆ ಭತ್ಯೆಗಳನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments