ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 5447 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ SBI 5447 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ 380 ಹುದ್ದೆಗಳು ಖಾಲಿ ಇವೆ, ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments