ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 65 ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : ಒಟ್ಟು 65 ಹುದ್ದೆಗಳು
ವಲಯ ಸಲಹೆಗಾರ - 1 ಹುದ್ದೆ
ಮ್ಯಾನೇಜರ್ (ಕ್ರೆಡಿಟ್ ವಿಶ್ಲೇಷಕ) - 55 ಹುದ್ದೆಗಳು
ಮ್ಯಾನೇಜರ್ (ಪ್ರಾಜೆಕ್ಟ್ಸ್ ಡಿಜಿಟಲ್ ಪಾವತಿಗಳು) - 5 ಹುದ್ದೆಗಳು
ಮ್ಯಾನೇಜರ್ (ಉತ್ಪನ್ನಗಳ ಡಿಜಿಟಲ್ ಪಾವತಿಗಳು/ಕಾರ್ಡ್‌ಗಳು) - 2 ಹುದ್ದೆಗಳು
ಮ್ಯಾನೇಜರ್ (ಉತ್ಪನ್ನಗಳ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು) - 2 ಹುದ್ದೆಗಳು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇಪದವಿ/ CA/ CFA/ ICWA/MBA/ MMS/BE/ B.Tech/MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಲಯ ಸಲಹೆಗಾರ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
- SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಟ 25 ವರ್ಷ ವಯಸ್ಸು ಹಾಗೂ ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರುವ ಅಭರ್ತಿಗಳು ಅರ್ಜಿ ಸಲ್ಲಿಸಬಹುದು.
* ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ 63,840/- ರಿಂದ 78,230/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments