ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 6,160 ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/09/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ತರಬೇತಿ ನೀಡಲು ನೇಮಕ ಮಾಡಿಕೊಳ್ಳಲಾಗತ್ತಿದೆ. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ 175 ತರಬೇತಿ ಸ್ಥಾನಗಳಿವೆ. ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
- SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-08-2023 ಅನ್ವಯವಾಗುವಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments