ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 8283 ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ8283 ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/12/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
* ಈ 8283 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/12/2023 ಎಂದು ನಿಗದಿಪಡಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು 10/12/2023 ವರೆಗೆ ವಿಸ್ತರಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-04-2023 ಅನ್ವಯವಾಗುವಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments