ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ68 ಕ್ರೀಡಾವಲಯದ ಸಾಧಕರಿಗೆ ಆಫೀಸರ್ ಮತ್ತು ಕ್ಲರಿಕಲ್ ಸಿಬ್ಬಂದಿ ಮೀಸಲಿಟ್ಟಿದ್ದು ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಾಸ್ಕೆಟ್‌ಬಾಲ್, ಕ್ರಿಕೆಟ್, ಫುಟ್‌ಬಾಲ್, ಹಾಕಿ, ವಾಲಿಬಾಲ್, ಕಬಡ್ಡಿ, ಟೇಬಲ್ ಟೆನಿಸ್ ಮತ್ತು ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 68
ಆಫಿಸರ್ - 17
ಕ್ಲರಿಕಲ್ ಸಿಬ್ಬಂದಿ - 51
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments