ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ125 ದ್ವಿತೀಯ ದರ್ಜೆ ಗುಮಾಸ್ತರು, ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/09/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 125
ದ್ವಿತೀಯ ದರ್ಜೆ ಗುಮಾಸ್ತರು - 123
ಕಂಪ್ಯೂಟರ್ ಪ್ರೋಗ್ರಾಮರ್ - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ ಶೇ.50ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,180/-
* SC, ST, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 590/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ದ್ವಿತೀಯ ದರ್ಜೆ ಗುಮಾಸ್ತರು - 24,910/- ರೂ ಗಳಿಂದ 55,655/- ರೂ
- ಕಂಪ್ಯೂಟರ್ ಪ್ರೋಗ್ರಾಮರ್ - 36,985/- ರೂ ಗಳಿಂದ 89,600/- ರೂ
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments