ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ123 ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
- ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ18/07/2024 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 50% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು.
- ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1,180/-
* SC, ST, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 590/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ24,910/- ರೂ ಗಳಿಂದ 55,655/- ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments