ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಈ ಕೂಡಲೇ ಅರ್ಜಿ ಸಲ್ಲಿಸಿ

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI )ದಲ್ಲಿ ಖಾಲಿ ಇರುವ ಒಟ್ಟು 25 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ 09/07/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಆನ್ ಲೈನ್ ಪರೀಕ್ಷೆಗಳು ನಡೆಯುವ ದಿನಾಂಕ :
ಮೊದಲ ಹಂತದ ಆನ್ ಲೈನ್ ಪರೀಕ್ಷೆ : 05-08-2023
ಎರಡನೇ ಹಂತದ ಆನ್ ಲೈನ್ ಪರೀಕ್ಷೆ : 09-09-2023
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ / ಪದವಿ / LLB ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 1000 ಅರ್ಜಿ ಶುಲ್ಕ ಹಾಗೂ SC/ST ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳಿಗೆ 3 ವರ್ಷ
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ
PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 44,500/- ರೂ ಗಳಿಂದ 89,150/- ರೂ ಗಳ ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments