ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿಪ್ಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 46 ಮ್ಯಾನೆಜ್ ಮೆಂಟ್, ಫೈನಾನ್ಸ್, ಹೆಚ್ ಆರ್, ಲಾ, ಸಿವಿಲ್ ಇಂಜಿನಿಯರ್, ಸಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ, ಕಾರ್ಯ ಕ್ಷಮತೆಯ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುವುದು. ಅರ್ಜಿ ಸಲ್ಲಿಕೆಯ ದಿನಾಂಕ 16 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 16 ಆಗಸ್ಟ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಭಾರತದ ಪ್ರಜೆಗಳು ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 46
* ಮ್ಯಾನೆಜ್ ಮೆಂಟ್ : 17
* ಫೈನಾನ್ಸ್ : 10
* ಹೆಚ್ ಆರ್ : 10
* ಲಾ : 5
* ಫೈರ್ ಅಂಡ್ ಸೆಕ್ಯೂರಿಟಿ : 2
* ಸಿವಿಲ್ ಇಂಜಿನಿಯರ್ : 1
* ಸಿ ಎಸ್ : 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 500/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 100/- ಶುಲ್ಕ ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು,
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments