Loading..!

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:27 ಫೆಬ್ರುವರಿ 2022
not found

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ  27 ಜವಾನ (Peon) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 25 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಮಾರ್ಚ್ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 25 ಮಾರ್ಚ್ 2022

No. of posts:  27
Application Start Date:  25 ಫೆಬ್ರುವರಿ 2022
Application End Date:  24 ಮಾರ್ಚ್ 2022
Last Date for Payment:  25 ಮಾರ್ಚ್ 2022
Work Location:  ಶಿವಮೊಗ್ಗ ಜಿಲ್ಲೆ
Selection Procedure: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಕಿರು ಪಟ್ಟಿ ತಯಾರಿಸಿ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC (10th) ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 200/-
ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ : 100/-

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಡುವುದರಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 24.03.2022ಕ್ಕೆ ಪುರುಷ, ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.

ಬಿ) ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು. 
ಸಿ) ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 35 ವರ್ಷಗಳು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000/- ರಿಂದ 28,950/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಶಿವಮೊಗ್ಗ ಜಿಲ್ಲೆ, KA,
To Download Official Notification

Comments