ವಿಜಯಪುರ ಜಿಲ್ಲೆಯ ಸಕ್ಕರೆ ಕಾರ್ಖಾನೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯಲ್ಲಿರುವ ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ (ಸಕ್ಕರೆ ಕಾರ್ಖಾನೆ) ಇಲ್ಲಿ ಖಾಲಿಯಿರುವ ಒಟ್ಟು 30 ವಿವಿಧ ತಾಂತ್ರಿಕ ಹಾಗು ತಾಂತ್ರಿಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ದಿನಾಂಕ 05 ಜನವರಿ 2022 ರಂದು ಈ ಕೆಳಗೆ ನೀಡಿರುವ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನದ ಸ್ಥಳ:
ಶ್ರೀ ಬಾಲಾಜಿ ಶುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಯರಗಲ,
ತಾ.ಮುದ್ದೇಬಿಹಾಳ ಜಿ.ವಿಜಯಪೂರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ B.Sc, M.Sc, AVSI, Diploma, ITI, SSLC, BE, DME ವಿದ್ಯಾರ್ಹತೆಯನ್ನು ಪೂರೈಸಿರಬೇಕು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ.
ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments