ವಿಜಯಪುರ ಜಿಲ್ಲೆಯ ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶ್ರೀ ಸಿದ್ಧೇಶ್ವರ ಕೋ-ಆಪರೇಟಿವ್ ಬ್ಯಾಂಕ್ ವಿಜಯಪುರ ಇಲ್ಲಿ ಖಾಲಿ ಇರುವ 48 ಪ್ರಧಾನ ವ್ಯವಸ್ಥಾಪಕರು, ಮ್ಯಾನೇಜರ್, ಹಿರಿಯ ವ್ಯವಸ್ಥಾಪಕ, ಕಂಪ್ಯೂಟರ್ ಇಂಜಿನಿಯರ್, ಜೂನಿಯರ್ ಮ್ಯಾನೇಜರ್, ಹಿರಿಯ ಸಹಾಯಕ, ಮತ್ತು ವಾಹನ ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1.5 ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಜುಲೈ 2024 ರಂದು ಸಾಯಂಕಾಲ 5.00 ಗಂಟೆ ಯೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 48
ಪ್ರಧಾನ ವ್ಯವಸ್ಥಾಪಕರು - 1
ಮ್ಯಾನೇಜರ್ - 1
ಹಿರಿಯ ವ್ಯವಸ್ಥಾಪಕ - 11
ಕಂಪ್ಯೂಟರ್ ಇಂಜಿನಿಯರ್ - 1
ಜೂನಿಯರ್ ಮ್ಯಾನೇಜರ್ - 4
ಹಿರಿಯ ಸಹಾಯಕ - 13
ಕಿರಿಯ ಸಹಾಯಕ - 11
ಅಟೆಂಡರ್/ಪ್ಯೂನ್/ಕಾವಲುಗಾರ - 5
ವಾಹನ ಚಾಲಕ - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, ಪದವಿ, BE, ಸ್ನಾತಕೋತ್ತರ ಪದವಿ, MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಮತ್ತು ಕನಿಷ್ಠ 3 ರಿಂದ 5 ವರ್ಷ ಬ್ಯಾಂಕಿನಲ್ಲಿ ಸೇವೆ ಸಲ್ಲಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು
SC/ ST/ ಪ್ರವರ್ಗ- 1/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 600/- ರೂ
ಸಾಮಾನ್ಯ/ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ; 1200/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments