ತುಮಕೂರು ಜಿಲ್ಲೆಯ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ(ರಿ.) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ತುಮಕೂರು ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಶ್ರೀ ಸಿದ್ಧಾರ್ಥಶಿಕ್ಷಣ ಸಂಸ್ಥೆ(ರಿ.) ಸಿದ್ಧಾರ್ಥನಗರ, ಈ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ 1) ಶ್ರೀ ಸಿದ್ಧಾರ್ಥ ಪದವಿ ಪೂರ್ವ ಉಲೇಜು, ಮಧುಗಿರಿ 2) ಶ್ರೀ ಸಿದ್ಧಾರ್ಥ ಪದವಿಪೂರ್ವ ಕಾಲೇಜು, ಕುಣಿಗಲ್ 3) ಶ್ರೀ ಸಂಘಮಿತ್ರ ಮಹಿಳಾ ಪದವಿ - ಪೂರ್ವ ಕಾಲೇಜು, ವಿಜಯನಗರ, ಬೆಂಗಳೂರು ಇಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥನಗರ,
ತುಮಕೂರು ತಾಲ್ಲೂಕು, ತುಮಕೂರು ಜಿಲ್ಲೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ B.PEDಮತ್ತುM.PED ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
- ಸಾಮಾನ್ಯವರ್ಗ 40 ವರ್ಷ
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments