ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ (ಎಸ್ ಐಡಿಬಿಐ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ 50 ಜನರಲ್ ಸ್ಟ್ರೀಮ್ ನ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-ನವೆಂಬರ್-2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ : 50
UR- 22
SC - 11
ST - 08
OBC - 04
EWS - 05
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/ OBC/EWS ಅಭ್ಯರ್ಥಿಗಳು: ರೂ.1100/- ಹಾಗೂ SC/ST/Pw B D ಅಭ್ಯರ್ಥಿಗಳು: ರೂ.175/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 08-ನವೆಂಬರ್-2023 ರಂತೆ ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PwBD ( UR / EWS) ಅಭ್ಯರ್ಥಿಗಳು : 10 ವರ್ಷಗಳು
PwBD (OBC) ಅಭ್ಯರ್ಥಿಗಳು : 13 ವರ್ಷಗಳು
PwBD (SC/ST) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 40,500- ರೂ ಗಳಿಂದ 89,150/- ರೂ ಗಳ ವರೆಗೆ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments