ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಂಘ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ5 ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಂಘವು ಪೂರೈಸುವ ಮೂಲ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಡೀಕರಿಸಿ, ದಿನಾಂಕ 28-12-2023 ರೊಳಗಾಗಿ ಸಂಘದ ಕಚೇರಿಗೆ ತಲುಪಿಸತಕ್ಕದ್ದು.
* ಹುದ್ದೆಯ ವಿವರ :
- ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ - 05
ಅರ್ಜಿ ಸಲ್ಲಿಸುವ ವಿಧಾನ :
- ಸಂಘದಿಂದ ಪೂರೈಸಿದ ಮೂಲ ಅರ್ಜಿಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಪೂರಕ ದಾಖಲೆಗಳ ನಕಲುಗಳನ್ನು ಸ್ವಯಂ ದೃಢೀಕರಿಸಿ "ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಸರ್ಜಾಪುರ - 562125, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ" ಇವರಿಗೆ ದಿನಾಂಕ : 28-12-2023 ರಂದು ಸಂಜೆ 5:00 ಗಂಟೆ ಒಳಗಾಗಿ ಖುದ್ದಾಗಿ ಅರ್ಜಿ ಸಲ್ಲಿಸತಕ್ಕದ್ದು.
ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
- ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.
ವೇತನ ಶ್ರೇಣಿ : ರೂ 21400-500-22400-550-24600-600-27000-650-29600-750-32600-850-36000-950-39800-1100-42000
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪ್ರಕಟಣೆಯನ್ನು ಗಮನಿಸಿರಿ





Comments