ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಸತ್ಲುಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ400 ಗ್ರಾಜುಯೇಟ್, ಟೆಕ್ನೀಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು08-01-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 400
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು : 175
ಟೆಕ್ನೀಷಿಯನ್ (ಡಿಪ್ಲೊಮ) ಅಪ್ರೆಂಟಿಸ್ ಹುದ್ದೆಗಳು : 100
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು : 125
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಗೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 100 /- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ : 10,000 /-
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ ಹುದ್ದೆಗಳಿಗೆ : 8000 /-
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ : 7000 /- ರೂ ವೇತನವನ್ನು ನಿಗದಿಪಡಿಸಲಾಗಿದೆ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments