ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 308 ಫೀಲ್ಡ್ ಇಂಜಿನಿಯರ್ ಮತ್ತುಫೀಲ್ಡ್ ಆಫೀಸರ್, ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತುಜೂನಿಯರ್ ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು18/09/2023 ರಿಂದ ಆರಂಭಗೊಂಡು 09/10/2023 ರಂದು ಕೊನೆಗೊಳ್ಳುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
- ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.600/-
- ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತು ಜೂನಿಯರ್ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.300/- ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
- SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ.
- ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ.60000/-
- ಜೂನಿಯರ್ ಫೀಲ್ಡ್ ಇಂಜಿನಿಯರ್ ಮತ್ತು ಜೂನಿಯರ್ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ರೂ. 45000 /- ರೂ ವೇತನವನ್ನು ನಿಗದಿಪಡಿಸಲಾಗಿದೆ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments