ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI)ದಲ್ಲಿ ಖಾಲಿ ಇರುವ 100 ಹದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (SIDBI)ದಲ್ಲಿ ಖಾಲಿ ಇರುವ 100 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 'ಎ' ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 24 ಮಾರ್ಚ್ 2022ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು April 16, 2022ರಂದು ನಡೆಯುವ ಆನ್ಲೈನ್ ಪರೀಕ್ಷೆಗೆ ಹಾಜರಾಗಬೇಕು.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : 04/03/2022
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24/03/2022
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಹಾಗೂ ಗರಿಷ್ಟ 24 ವರ್ಷ ವಯಸ್ಸು ಮೀರಿರಬಾರದು
ಎ) OBC ಅಭ್ಯರ್ಥಿಗಳಿಗೆ 3 ವರ್ಷ
ಬಿ) SC/ST ಅಭ್ಯರ್ಥಿಗಳಿಗೆ 5 ವರ್ಷ
ಸಿ ) PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 28,150/- ರಿಂದ 70,000/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments