ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಡೆವಲಪರ್, ಟೆಕ್ನಿಕಲ್ ಲೀಡ್, ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಒಟ್ಟು 30 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಲಾಗಿದ್ದು, ಚೆನ್ನೈ, ಮುಂಬೈ, ಲಕ್ನೊ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಕಛೇರಿ ವಿಳಾಸಕ್ಕೆ ಮತ್ತು ಸ್ಕ್ಯಾನ್ಡ್(Scan) ಮಾಡಿದ ಕಾಪಿಯನ್ನು recruitment@sidbi.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ದಿನಾಂಕ : 21-11-2021 ರೊಳಗೆ ಸಲ್ಲಿಸಲು ಸೂಚಿಸಿದೆ.
ಅರ್ಜಿ ಸಲ್ಲಿಸುವ ವಿಳಾಸ :
Chief General Manager,
Human Resources Vertical (HRV),
Small Industries Development Bank of India,
Swavalamban Bhavan, Plot No. C-11, 'G' Block,
Bandra Kurla Complex, Bandra (East), Mumbai - 400051
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು
ಡೆವಲಪರ್ ಹುದ್ದೆಗಳಿಗೆ ಇಂಜಿನಿಯರಿಂಗ್ ಪದವಿ ಅಥವಾ MCA ಪದವಿ ಹೊಂದಿರಬೇಕು
ಟೆಕ್ನಿಕಲ್ ಲೀಡ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು
ಟೆಕ್ನಿಕಲ್ ಆರ್ಕಿಟೆಕ್ಟ್ ಮತ್ತು ಟೆಕ್ನಿಕಲ್ ಪ್ರೊಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಅಥವಾ MCA ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವೇತನವನ್ನು ನಿಗದಿಪಡಿಸಲಾಗಿದೆ.
ಕಿರಿಯ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 8,00,000/- ರಿಂದ 12,00,000/-ರೂ,
ಹಿರಿಯ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 14,00,000/- ರಿಂದ 17,00,000/-ರೂ,
ಟೆಕ್ನಿಕಲ್ ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 20,00,000/- ರಿಂದ 25,00,000/-ರೂ,
ಲೀಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 27,00,000/- ರಿಂದ 30,00,000/-ರೂ,
ಟೆಕ್ನಿಕಲ್ ಆರ್ಕಿಟೆಕ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 30,00,000/- ರಿಂದ 35,00,000/-ರೂ ಮತ್ತು
ಟೆಕ್ನಿಕಲ್ ಪ್ರೊಗ್ರಾಂ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 35,00,000/- ರಿಂದ 40,00,000/-ರೂ ವೇತನವನ್ನು ನಿಗದಿಪಡಿಸಿದೆ.





Comments