ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1202 ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1202
ಅಸಿಸ್ಟೆಂಟ್ ಲೋಕೋ ಪೈಲಟ್ - 827
ಟ್ರೈನ್ಸ್ ಮ್ಯಾನೇಜರ್ - 375
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 10ನೇ, ITI, ಡಿಪ್ಲೊಮಾ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments