Loading..!

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. .
| Date:19 ಜೂನ್ 2019
not found
ದೇಶದ ಖಾಸಗಿ ವಲಯದ ಬ್ಯಾಂಕುಗಳಲ್ಲಿ ಪ್ರಮುಖವಾಗಿರುವ 'ಸೌತ್ ಇಂಡಿಯನ್ ಬ್ಯಾಂಕ್' ಪ್ರೊಬೇಷನರಿ ಆಫೀಸರ್ ಮತ್ತು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ. ಕೇರಳದ ತ್ರಿಶೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಬ್ಯಾಂಕ್ ನಲ್ಲಿ, ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್ 19 ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಆನ್ಲೈನ್ ಪರೀಕ್ಷೆಯು ಜುಲೈನಲ್ಲಿ ನಡೆಯಲಿದ್ದು, ರಾಜ್ಯದಲ್ಲಿ ಐದು ಕಡೆ ಪರೀಕ್ಷಾ ಕೇಂದ್ರಗಳಿರಲಿವೆ.
*ದಕ್ಷಿಣ ಭಾರತದಲ್ಲಿಯೇ 310 ಕ್ಲರ್ಕ್ ಹುದ್ದೆಗಳಿವೆ.

ಹುದ್ದೆಗಳ ವಿವರ:
* ಪ್ರೊಬೆಷನರಿ ಆಫೀಸರ್ -160
* ಕ್ಲರ್ಕ್ - 385
No. of posts:  545
Application Start Date:  19 ಜೂನ್ 2019
Application End Date:  30 ಜೂನ್ 2019
Selection Procedure: ಮೊದಲಿಗೆ ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದವರನ್ನು ಗ್ರೂಪ್ ಡಿಸ್ಕಷನ್ ಮತ್ತು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಈ 3 ಪರೀಕ್ಷೆಯಲ್ಲಿಯೂ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ. ನೇಮಕವಾದ ಪ್ರಾರಂಭದ ಎರಡು ವರ್ಷಗಳು ಪ್ರೊಬೆಷನರಿ ಪಿರಿಯಡ್ ಆಗಿರುತ್ತದೆ. ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿನ ಶಾಲೆಯಲ್ಲಾದರೂ ಕಾರ್ಯನಿರ್ವಹಿಸಲು ಸಿದ್ಧರಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Qualification: ಯಾವುದೇ ಪದವೀಧರರು ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ 10 ನೇ ತರಗತಿ, ದ್ವಿತೀಯ ಪಿಯುಸಿ ಮತ್ತು ಪದವಿಯಲ್ಲಿ ಶೇ.60 ಅಂಕಗಳೊಂದಿಗೆ ತೇರ್ಗಡೆಯಾಗಬೇಕಿರುವುದು ಕಡ್ಡಾಯ. ದೂರ ಶಿಕ್ಷಣದ ಮೂಲಕ ಪದವಿ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ. ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee: ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಪ್ರೊಬೆಷನರಿ ಆಫೀಸರ್ ಹುದ್ದೆಗೆ 800/- ರೂ. ಕ್ಲರ್ಕ್ ಹುದ್ದೆಗೆ 600/- ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಪಿಒ ಹುದ್ದೆಗೆ 200/- ರೂ. ಕ್ಲರ್ಕ್ ಕುತ್ತಿಗೆ 150/- ರೂ. ಅರ್ಜಿ ಶುಲ್ಕ ಪಾವತಿಸಬೇಕು ಆನ್ ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
Age Limit: ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 25 ವರ್ಷ, ಅಂದರೆ, 1994 ರ ಜುಲೈ1 ಮತ್ತು 2000ನೇ ಇಸ್ವಿಯ ಜೂನ್ 30ರ ನಡುವೆ ಜನಿಸಿದವರು.ಅರ್ಜಿ ಸಲ್ಲಿಸಬಹುದು. ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ, ಅಂದರೆ ಅಭ್ಯರ್ಥಿಗಳು 1993 ರ ಜುಲೈ 1 ಮತ್ತು 2000 ನೇ ಇಸವಿಯ ಜೂನ್ 30 ರ ನಡುವೆ ಜನಿಸಿದವರಾಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Pay Scale: Rs. 11,775 - 31,540 (ಕ್ಲರ್ಕ್) ಮತ್ತು Rs. 23,700 42,020 (ಪಿಓ)
to download official notification of PO officers
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments