ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡೇಟಾ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಲೀಡ್ – ಡೆಸ್ಕ್ರಿಪ್ಟಿವ್ ಅನಾಲಿಟಿಕ್ಸ್, ಸೀನಿಯರ್ ಡೇಟಾ ಸೈಂಟಿಸ್ಟ್, ಮತ್ತು ಡೇಟಾ ಸೈಂಟಿಸ್ಟ್, ಮ್ಯಾನೇಜರ್ - ಡೆಸ್ಕ್ರಿಪ್ಟಿವ್ ಅನಾಲಿಟಿಕ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 26 ಜೂನ್ 2023 ಕೊನೆಯ ದಿನಾಂಕವಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶೇ 50 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಸಾಮಾನ್ಯ / OBC ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments