ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 904 ಫೀಟರ್, ವೆಲ್ದರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :02/08/2023.
ಹುದ್ದೆಗಳ ವಿವರ : 904
ಹುಬ್ಬಳ್ಳಿ ವಿಭಾಗದಲ್ಲಿ - 237
ಕ್ಯಾರೇಜ್ ರಿಪೇರ್ ವರ್ಕ್ ಶಾಪ್, ಹುಬ್ಬಳ್ಳಿ - 217
ಬೆಂಗಳೂರು ವಿಭಾಗದಲ್ಲಿ - 230
ಮೈಸೂರು ವಿಭಾಗದಲ್ಲಿ - 177
ಮೈಸೂರಿನ ಸೆಂಟ್ರಲ್ ವರ್ಕ್ ಶಾಪ್ - 43
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆದಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ 100 / -ರೂ . ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ ST/ ಅಂಗವಿಕಲ/ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC ST ಅಭ್ಯರ್ಥಿಗಳಿಗೆ 5 ವರ್ಷ
PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments