Loading..!

ಭಾರತೀಯ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:24 ಡಿಸೆಂಬರ್ 2019
not found
ಭಾರತೀಯ ನೈಋತ್ಯ ರೈಲ್ವೆ(SWR)- ರೈಲ್ವೆ ನೇಮಕಾತಿ ವಿಭಾಗ ಹುಬ್ಬಳ್ಳಿ ಇಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿ ಖಾಲಿ ಇರುವ ಒಟ್ಟು ವಿವಿಧ 10 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು.
ಅರ್ಹ ಅಭ್ಯರ್ಥಿಗಳು ಜನವರಿ 20,2020ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
No. of posts:  10
Application Start Date:  24 ಡಿಸೆಂಬರ್ 2019
Application End Date:  20 ಜನವರಿ 2020
Work Location:  ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, 12 ನೇತರಗತಿ, ITI, ಗ್ರಾಜುಯೇಷನ್, ಪೋಸ್ಟ್ ಗ್ರಾಜುಯೇಷನ್, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ, ಬೋರ್ಡ್‌ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ/ಮಹಿಳಾ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಟ 30 ಅಥವಾ 33 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಪರಿ‍ಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ

Comments