ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 7500 ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಅಸಿಸ್ಟೆಂಟ್ ಅಡಿಟ್ ಆಫೀಸರ್, ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹಾಗೂ ಇನ್ಸ್ಪೆಕ್ಟರ್ ಆಫ್ ಇನ್ ಕಮ್ ಟ್ಯಾಕ್ಸ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 7500 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು 03-05-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ CA/ CMA/ MBA/ M.Com/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಹುದ್ದೆಗಳಿಗನುಗುಣವಾಗಿ ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 45 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿಯಲ್ಲಿ ಸಡಿಲಿಕೆ :
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 25,500/- ರೂ ಗಳಿಂದ 1,51,100/- ರೂ ಗಳವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments