ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ದಲ್ಲಿ ಖಾಲಿ ಇರುವ 6,506 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿ
Published by: Hanamant Katteppanavar | Date:12 ಜನವರಿ 2021

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ಯಲ್ಲಿ ಖಾಲಿ ಇರುವ 6,506 ಗ್ರೂಪ್ ಬಿ (ಗೆಜೆಟೆಡ್ / ನಾನ್ ಗೆಜೆಟೆಡ್) ಮತ್ತು ವಿವಿಧ ಗ್ರೂಪ್-ಸಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಪೂರ್ಣ ಸಮಯದ ಆಧಾರದ ಮೇಲೆ ಭಾರತದಾದ್ಯಂತ ವಿವಿಧ ಇಲಾಖೆಗಳಲ್ಲಿ ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಪ್ರಕ್ರಿಯೆಯು 2020 ಡಿಸೆಂಬರ್ 29 ರಂದು ಪ್ರಾರಂಭಗೊಂಡು ಮತ್ತು ಜನವರಿ 31, 2021 ರಂದು ಕೊನೆಗೊಳ್ಳುತ್ತದೆ.
* ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-12-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2021
- ಆನ್‌ಲೈನ್ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 02-02-2021
* ಹುದ್ದೆಗಳ ವಿವರ :
- ಗ್ರೂಪ್ ಬಿ (ನಾನ್ ಗೆಜೆಟೆಡ್)- 3,513 ಹುದ್ದೆಗಳು
- ಗ್ರೂಪ್ ಸಿ- 2,743 ಹುದ್ದೆಗಳು ಮತ್ತು
- ಗ್ರೂಪ್ ಬಿ (ಗೆಜೆಟೆಡ್)- 250 ಹುದ್ದೆಗಳು
ಒಟ್ಟು ಹುದ್ದೆಗಳು - 6,506 ಹುದ್ದೆಗಳು
No. of posts: 6506
Application Start Date: 29 ಡಿಸೆಂಬರ್ 2020
Application End Date: 31 ಜನವರಿ 2021
Work Location: All Over India
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಇ) - ಶ್ರೇಣಿ I ಮತ್ತು ಶ್ರೇಣಿ- II ಮತ್ತು ಶ್ರೇಣಿ -3 ಪರೀಕ್ಷೆ (ವಿವರಣಾತ್ಮಕ) ಮತ್ತು ಶಾರ್ಟ್‌ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿಯಲ್ಲಿ ಗಣಿತದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು, ಸ್ನಾತಕೋತ್ತರ ಪದವಿ, ಸಿಎ / ಎಂಬಿಎ ಹಣಕಾಸು ವಿಭಾಗದಲ್ಲಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
- ಹುದ್ದೆಗಳಿಗೆ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು - 100 ರೂ ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.ಮತ್ತು
- ಪ ಜಾ, ಪ ಪಂ, ಪಿಡಬ್ಲ್ಯುಡಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ- ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಹುದ್ದೆಗಳ ಅನುಸಾರವಾಗಿ ಜನವರಿ 1, 2021 ಅನ್ವಯಿಸುವಂತೆ ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಮೀಸಲಾತಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Pay Scale: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ದಿಂದ 1,51,100/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.





Comments