ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 75,768 ಕಾನ್ ಸ್ಟೆಬಲ್ GD ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ, ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್ ಮತ್ತು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋಗಳಲ್ಲಿ ಖಾಲಿ ಇರುವ 75,768 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 24/11/2023 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು ದಿನಾಂಕ28/12/2023 ರಂದು ಕೊನೆಯಾಗುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 24/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/12/2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 29/12/2023
ಹುದ್ದೆಗಳ ವಿವರ : 75768
BSF : 27875
CISF : 8598
CRPF : 25427
SSB : 5278
ITBP : 3006
AR : 4776
SSF : 583
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 28-12-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments