Loading..!

ಸಿಬ್ಬಂದಿ ನೇಮಕಾತಿ ಆಯೋಗ(SSC)ದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
| Date:23 ಸೆಪ್ಟೆಂಬರ್ 2019
not found
ಸಿಬ್ಬಂದಿ ನೇಮಕಾತಿ ಆಯೋಗ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಸ್ಟೆನೊಗ್ರಾಫರ್ ಸಿ ಮತ್ತು ಡಿ ಹುದ್ದೆಗಳ ನೇಮಕಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಅಧಿಸೂಚನೆ ಹೊರಡಿಸಿದೆ.
2020 ಮೇ 5ರಿಂದ 7ನೇ ತಾರೀಕಿನವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ರಾಜ್ಯದ 9 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.ಕಳೆದ ವರ್ಷ ರಾಜ್ಯದಲ್ಲಿ 5 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.ಈ ಬಾರಿ ಹೆಚ್ಚುವರಿಯಾಗಿ ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ ಮತ್ತು ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಆನ್ ಲೈನ್ ಮೂಲಕ ಅರ್ಜಿಸಲ್ಲಿಸಲು 18 ಮತ್ತು ಶುಲ್ಕ ಪಾವತಿಸಲು ಅಕ್ಟೋಬರ್ 20 ಕೊನೆಯ ದಿನವಾಗಿದೆ.
Application Start Date:  22 ಸೆಪ್ಟೆಂಬರ್ 2019
Application End Date:  18 ಅಕ್ಟೋಬರ್ 2019
Last Date for Payment:  20 ಅಕ್ಟೋಬರ್ 2019
Selection Procedure: * ಕಂಪ್ಯೂಟರ್ ಬೇಸ್ಡ್ ಪರೀಕ್ಷೆ ಮೂರೂ ವಿಭಾಗಗಳಲ್ಲಿ ನಡೆಯುತ್ತದೆ.ಭಾಗ - 1 ಜನರಲ್ ಇಂಟಲಿಜೆನ್ಸ ಅಂಡ್ ರಿಸೆನಿಂಗ್, 2 - ಜನರಲ್ ಅವೇರ್ನೆಸ್ , 3 - ಇಂಗ್ಲಿಷ್ ಲ್ಯಾಂಗ್ವೇಜ್ ಅಂಡ್ ಕಾಂಪ್ರೆ ಹೆನ್ಷನ್ ಮೂರೂ ವಿಭಾಗ ಗಳಿಗೂ ಕ್ರಮವಾಗಿ 50 , 50 ಹಾಗು 100 ಪ್ರಶ್ನೆಗಳು ಹಾಗು ಅಂಕಗಳಿರುತ್ತವೆ.
* ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆ ಇರುತ್ತದೆ.ಪ್ರತಿ ತಪ್ಪು ಉತ್ತರಕ್ಕೆ 0 .25 ನೆಗೆಟಿವ್ ಮಾರ್ಕಿಂಗ್ ಇರುತ್ತದೆ.
* ಸ್ಟೆನೋಗ್ರಫಿ ಕೌಶಲ ಪರೀಕ್ಷೆ ಇರುತ್ತದೆ.
Qualification: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು.
Fee: ಅರ್ಜಿ ಶುಲ್ಕ ರೂ. 100 /-.ಎಸ್ ಸಿ / ಎಸ್ ಟಿ / ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: * ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಸ್ಟೆನೊಗ್ರಾಫರ್ ಗ್ರೇಟ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಹುದ್ದೆಗಳಿಗೆ ಗರಿಷ್ಠ 27 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
* ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments