Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ವಿವಿದ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:23 ಜುಲೈ 2022
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಜೂನಿಯರ್ ಟ್ರಾನ್ಸ್ ಲೆಟರ್ ಮತ್ತು  ಸೀನಿಯರ್ ಟ್ರಾನ್ಸ್ ಲೆಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/08/2022ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Application Start Date:  20 ಜುಲೈ 2022
Application End Date:  4 ಆಗಸ್ಟ್ 2022
Last Date for Payment:  5 ಆಗಸ್ಟ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧ ಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ತಿದ್ದುಪಡಿಗೆ ಆಗಸ್ಟ್ 6 ವರೆಗೆ ಅವಕಾಶ ನೀಡಲಾಗಿದೆ. ಒಂದುಬಾರಿ ತಿದ್ದುಪಡಿಗೆ 200/- ರೂ ಎರಡುಬಾರಿ ತಿದ್ದುಪಡಿಗೆ 500/- ರೂ ನಿಗದಿಪಡಿಸಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35,400/- ರಿಂದ 1,42,400/- ರೂ ವರೆಗೆ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments