ಸಿಬ್ಬಂದಿ ನೇಮಕಾತಿ ಆಯೋಗ(SSC) ದಲ್ಲಿ ಖಾಲಿ ಇರುವ ಹಿಂದಿ ಅನುವಾದಕರ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 312 ಕಿರಿಯ ಹಿಂದಿ ಅನುವಾದಕ/ಕಿರಿಯ ಅನುವಾದಕ ಮತ್ತು ಹಿರಿಯ ಹಿಂದಿ ಅನುವಾದಕ/ಹಿರಿಯ ಅನುವಾದಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-08-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-08-2024
- ಆನ್‌ಲೈನ್ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 26-08-2024
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ (ಪರೀಕ್ಷೆ- 1) : ಅಕ್ಟೊಬರ್ ನಿಂದ ನವೆಂಬರ್ 2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹಿಂದಿ-ಇಂಗ್ಲಿಷ್/ಇಂಗ್ಲಿಷ್-ಹಿಂದಿ ಭಾಷಾಂತರದಲ್ಲಿ ಉತ್ತಮ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments